ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ – ಸಿಎಂಗೆ ಹಿರಿಯ ನಟಿಯರ ಮನವಿ!

ಬೆಂಗಳೂರು : ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಮನವಿ ಮಾಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಅವರು ಮನವಿ ಮಾಡಿದರು ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ : ಧರ್ಮಸ್ಥಳ ಪ್ರಕರಣಕ್ಕೆ ವಿದೇಶದಿಂದ ಫಂಡಿಂಗ್ ಆರೋಪ – ತನಿಖೆಗೆ ED ಎಂಟ್ರಿ!

Btv Kannada
Author: Btv Kannada

Read More