ನಾಳೆ ಭಾರತ-ಪಾಕ್ ಮಹಾಕದನ.. ಪಂದ್ಯ ಎಷ್ಟು ಗಂಟೆಗೆ? ಫ್ರೀಯಾಗಿ ನೋಡುವುದೇಗೆ? ಇಲ್ಲಿದೆ ಡೀಟೆಲ್ಸ್!

ದುಬೈ : 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ನಾಳೆ (ಫೆ.23) ಬದ್ಧ ವೈರಿಗಳಾದ ಭಾರತ-ಪಾಕಿಸ್ತಾನ ತಂಡಗಳ ನಡುವೆ ಮಹಾಕದನ ನಡೆಯಲಿದೆ. ಕಳೆದ ಹಲವು ದಿನಗಳಿಂದ ಕೋಟ್ಯಾಂತರ ಕ್ರಿಕೆಟ್ ಪ್ರೇಮಿಗಳು ಈ ಒಂದು ಪಂದ್ಯಕ್ಕಾಗಿ ಕಾಯುತ್ತಿದ್ದು, ಇದೀಗ ಈ ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಈ ಹೈವೋಲ್ಟೆಜ್​ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣ ಆತಿಥ್ಯ ವಹಿಸಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸಿರುವ ಭಾರತ, ಈ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಆದರೆ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡ, ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೊತಿದೆ. ಹೀಗಾಗಿ ನಾಳಿನ ಪಂದ್ಯ ಪಾಕ್ ಪಾಲಿಗೆ ನಿರ್ಣಾಯಕವಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದ್ದು, ಟಾಸ್ ಪ್ರಕ್ರಿಯೆ 2 ಗಂಟೆಗೆ ನಡೆಯಲಿದೆ. ಈ ಮಹತ್ವದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್ಸ್ 18 ನೆಟ್‌ವರ್ಕ್‌ಗಳ ಚಾನೆಲ್‌ಗಳಲ್ಲಿ ನೋಡಬಹುದು. ಹಾಗೆಯೇ ಮೊಬೈಲ್‌ನಲ್ಲಿ ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಫ್ರೀಯಾಗಿ ವೀಕ್ಷಿಸಬಹುದು.

ಉಭಯ ತಂಡಗಳು ಹೀಗಿವೆ :

ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜ ಮತ್ತು ವರುಣ್ ಚಕ್ರವರ್ತಿ.

ಪಾಕಿಸ್ತಾನ ತಂಡ : ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್ ಕೀಪರ್), ಬಾಬರ್ ಆಝಂ, ಕಮ್ರಾನ್ ಗುಲಾಮ್, ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ಉಸ್ಮಾನ್ ಖಾನ್ ಮತ್ತು ಸೌದ್ ಶಕೀಲ್.

Btv Kannada
Author: Btv Kannada

Read More

Read More