ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ!

ಮಂಡ್ಯ : ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯಲ್ಲಿ ನಡೆದಿದೆ. ಕೆ.ಆರ್ ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ (26) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಘಟನೆ ನಡೆದಿದೆ. ಕಾವ್ಯಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ ಕಚೇರಿಯಲ್ಲಿ ಶುಕ್ರವಾರ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ.

ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ : ಐತಿಹಾಸಿಕ ಕೆಂಪು ಕೋಟೆಯಿಂದ 1 ಕೋಟಿ ಮೌಲ್ಯದ ವಜ್ರ ಖಚಿತ ಚಿನ್ನದ ಕಲಶ ಕಳವು!

Btv Kannada
Author: Btv Kannada

Read More