ರಾಯಚೂರು : ರಾಯಚೂರಿನಲ್ಲಿ ಹಳೇ ದ್ವೇಷ ಹಿನ್ನೆಲೆ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಶಾಂತ್ ಹಾಗೂ ಪ್ರವೀಣ್ ಬಂಧಿತ ಆರೋಪಿಗಳು.

ರಾಯಚೂರಿನ ಗಂಗಾನಿವಾಸ ರಸ್ತೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ವಿನಯ್ ಕುಮಾರ್ ಹಾಗೂ ಗಣೇಶ ಎಂಬುವವರ ಮೇಲೆ ಕಲ್ಲು ತೂರಲಾಗಿದ್ದು, ಬಳಿಕ ಕಲ್ಲೇಸೆದ ಪ್ರಶಾಂತ್ ಹಾಗೂ ಪ್ರವೀಣ್ನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಬರುತ್ತಿರುವ ವೇಳೆ ಸಮೀಪದ ಅಂಗಡಿ ಮೇಲೆ ಹತ್ತಿದ್ದ ಇಬ್ಬರು ದುಷ್ಕರ್ಮಿಗಳು, ನೋಡ ನೋಡುತ್ತಲೇ ಕಲ್ಲು ತೆಗೆದುಕೊಂಡು ಪ್ರಶಾಂತ್ ಹಾಗೂ ಪ್ರವೀಣ್ನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದಾರೆ. ಮಂಗಳವಾರ ಪೇಟೆ ನಿವಾಸಿಗಳಾದ ವಿನಯ್ ಮತ್ತು ಗಣೇಶ್ ಎಂಬುವವರಿಗೆ ಗಾಯಗಳಾಗಿದ್ದವು. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಆರೋಪಿಗಳು ಕಲ್ಲು ತೂರಾಟ ಮಾಡುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಇದೀಗ ಎಲ್ಲೆಡೆ ವೈರಲ್ ಆಗಿದೆ. ಮಾಹಿತಿಗಳ ಪ್ರಕಾರ ತಮ್ಮ ಏರಿಯಾದಲ್ಲಿ ರ್ಯಾಲಿ ಮಾಡಿದ್ದನ್ನ ಪ್ರಶ್ನಿಸಿ ಕಲ್ಲೇಸಿದಿರೋ ಆರೋಪ ಕೇಳಿಬಂದಿದೆ. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ!







