ಚಾಮರಾಜನಗರ : ಲಾರಿ, ಕಾರು ಹಾಗೂ ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಮೃತಪಟ್ಟ ಘಟನೆ ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ನಡೆದಿದೆ.
ಮೊಪೆಡ್ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಮೆರಾನ್ ಎಂಬ ಬಾಲಕ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಎಂಬ ಬಾಲಕರನ್ನು ಸಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೂವರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವೀರರಾಣಿ ಅಬ್ಬಕ್ಕ ದೇವಿಯವರ 500ನೇ ಜಯಂತೋತ್ಸವ – ರಥಯಾತ್ರೆಗೆ ಚಾಲನೆ ನೀಡಿದ ನಟಿ ತಾರಾ!
Author: Btv Kannada
Post Views: 229







