ಕಲಬುರಗಿ : ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಮಿಲ್ಲತ್ ನಗರ ಬಡಾವಣೆಯಲ್ಲಿ ನಡೆದಿದೆ.

50 ವರ್ಷದ ಬಿಲಾಲ್ ಅಹ್ಮದ್ ಕೊಲೆಯಾದ ವ್ಯಕ್ತಿ. ಹಳೆ ವೈಷಮ್ಯಕ್ಕೆ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮಿಡ್ನೈಟ್ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ!
Author: Btv Kannada
Post Views: 244







