ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ!

ಚಿಂತಕ, ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ದೇವದಾಸ್ ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸಿದ್ದರು. ಚಕ್ರವರ್ತಿ ಸೂಲಿಬೆಲೆ ಅವರ ತಂದೆ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೈಕ್​​​ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು, ಬಾಲಕನಿಗೆ ಗಂಭೀರ ಗಾಯ!

Btv Kannada
Author: Btv Kannada

Read More