ಜಪಾನ್ ಪ್ರಧಾನಿ ಶಿಗೆರು ಇಶಿಬಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ಘೋಷಿಸಿದ್ದಾರೆ. ಶಿಗೆರು ಇಶಿಬಾ ಅವರು ಅಧಿಕಾರಕ್ಕೇರಿ ಒಂದು ವರ್ಷ ಪೂರೈಸುವುದಕ್ಕಿಂತ ಮುಂಚೆಯೇ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತ ಕಳೆದುಕೊಂಡಿದ್ದಾರೆ.
ವಿಶ್ವದ 4ನೇ ಅತೀ ದೊಡ್ಡ ಆರ್ಥಿಕತೆಯಾಗಿರುವ ಜಪಾನ್‌ನಲ್ಲಿ ಆಹಾರ ವಸ್ತುಗಳ ಬೆಲೆ ಏರುತ್ತಿದ್ದು, ಕಾರು ಉದ್ಯಮದ ಮೇಲೆ ಅಮೆರಿಕ ಹೇರಿದ ಸುಂಕವು ಆರ್ಥಿಕತೆಗೆ ಹೊಡೆತ ನೀಡಿದೆ. ಈ ನಡುವೆಯೆ ಪ್ರಧಾನಿ ಶಿಗೆರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಸದ್ಯ ಅಮೆರಿಕದ ಸುಂಕದ ಕ್ರಮಗಳ ಕುರಿತ ಮಾತುಕತೆಗಳು ಒಂದು ತೀರ್ಮಾನಕ್ಕೆ ಬಂದಿವೆ. ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಪಕ್ಕಕ್ಕೆ ಸರಿದು ಮುಂದಿನ ತಲೆಮಾರಿಗೆ ದಾರಿ ಮಾಡಿಕೊಡಲು ತೀರ್ಮಾನಿಸಿದ್ದೇನೆ ಎಂದು ಶಿಗೆರು ಇಶಿಬಾ ಹೇಳಿದ್ದಾರೆ.
ಇದನ್ನೂ ಓದಿ : SWCL ಮೊದಲ ಆವೃತ್ತಿಯ ಚಾಂಪಿಯನ್ಸ್ ಮೋನಿಕಾ ಕಲ್ಲೂರಿ ಆರ್ಟ್ಸ್ ಒಡೆತನದ “ಟೀಮ್ ಮಂಜುಳ” ತಂಡದಿಂದ ವಿಜಯೋತ್ಸವ!
Author: Btv Kannada
Post Views: 412







