ಟ್ರಾಫಿಕ್ ಫೈನ್ ಡಿಸ್ಕೌಂಟ್ ಆಫರ್ ಬಳಸಿಕೊಂಡ ಸಿಎಂ ಸಿದ್ದರಾಮಯ್ಯ – ಕಟ್ಟಿದ ದಂಡ ಎಷ್ಟು ಗೊತ್ತಾ?

ಬೆಂಗಳೂರು : ಸಂಚಾರ ನಿಯಮಗಳ ಉಲ್ಲಂಘನೆಯ ದಂಡ ಪಾವತಿಗೆ ನೀಡಲಾಗಿರುವ ಶೇ50ರಷ್ಟು ರಿಯಾಯಿತಿಯನ್ನು ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮುಂತಾದ ರಾಜಕೀಯ ವ್ಯಕ್ತಿಗಳೂ ಸಹ ಬಳಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘನೆಗೆ ಶೇ50ರ ರಿಯಾಯಿತಿ ಅಡಿ ದಂಡ ಪಾವತಿಸಿದ್ದಾರೆ.

2024ರ ಜನವರಿ ಮತ್ತು ಆಗಸ್ಟ್ ನಡುವೆ ಮುಖ್ಯಮಂತ್ರಿಗಳ ಅಧಿಕೃತ ಟೊಯೋಟಾ ಫಾರ್ಚೂನರ್ ಕಾರು ಆರು ಸೀಟ್‌ಬೆಲ್ಟ್ ಉಲ್ಲಂಘನೆ ಮತ್ತು ಒಂದು ವೇಗದ ಚಾಲನೆ ಪ್ರಕರಣದಲ್ಲಿ ಸಿಲುಕಿತ್ತು. ಇವೆಲ್ಲವೂ ಬೆಂಗಳೂರಿನ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅಡಿಯಲ್ಲಿ ಕಣ್ಗಾವಲು ಕ್ಯಾಮರಾಗಳಲ್ಲಿ ಸೆರೆಯಾಗಿದ್ದವು. ಸೀಟ್‌ಬೆಲ್ಟ್ ಉಲ್ಲಂಘನೆಯ ಸಮಯದಲ್ಲಿ ಸಿದ್ದರಾಮಯ್ಯ ಅವರೇ ಪ್ರಯಾಣಿಕರ ಸೀಟಿನಲ್ಲಿ ಕುಳಿತಿದ್ದರು ಎಂದು ವರದಿಯಾಗಿದೆ. ಇದೀಗ ಸರ್ಕಾರ ಶೇಕಡಾ 50ರಷ್ಟು ಸಂಚಾರ ದಂಡ ವಿನಾಯಿತಿಯನ್ನು ಪಡೆದುಕೊಂಡು ಸಿಎಂ ಕಚೇರಿ 2,500 ರೂ. ದಂಡ ಪಾವತಿಸಿ, ಬಾಕಿ ಹಣವನ್ನು ಇತ್ಯರ್ಥಪಡಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಅವರ ವಾಹನಕ್ಕೆ ಸಂಬಂಧಿಸಿದ 10 ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆಗಳಿಗೆ ದಂಡ ಪಾವತಿಸಿದ್ದಾರೆ. ಇದರಲ್ಲಿ ವೇಗದ ಚಾಲನೆ, ಸಿಗ್ನಲ್ ಉಲ್ಲಂಘನೆ ಮತ್ತು ಸೀಟ್‌ಬೆಲ್ಟ್ ಸಂಬಂಧಿತ ಅಪರಾಧಗಳು ಸೇರಿವೆ. ಅವರ ಕಚೇರಿಯು ಒಟ್ಟು 3,250 ರೂ. ಪಾವತಿಸಿದೆ. ಇದರಲ್ಲಿ, ಕೆಲವು ದಂಡಗಳು 2020ಕ್ಕಿಂತಲೂ ಹಿಂದಿನವುಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಮದ್ದೂರು ಗಣೇಶೋತ್ಸವದಲ್ಲಿ ಕಲ್ಲು ತೂರಾಟ – ‘ಕೈ’ ಸರ್ಕಾರದ ವಿರುದ್ಧ ಮಾಜಿ ಸಚಿವ ಡಿಸಿ ತಮ್ಮಣ್ಣ ಆಕ್ರೋಶ!

Btv Kannada
Author: Btv Kannada

Read More