ಯಾವ್ದೇ ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತದೆ – ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿಗೆ HDK ವಾರ್ನಿಂಗ್!

ಮಂಡ್ಯ : ಯಾವ್ದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ ಕರೆ ಮಾಡಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಡಿಸಿಗೆ ಕರೆ ಮಾಡಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮಾತನಾಡಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಮದ್ದೂರಿನಲ್ಲಿ ನಿನ್ನೆ ರಾತ್ರಿ ಆಗಿದ್ದೇನು? ಮದ್ದೂರು ಪಟ್ಟಣದ ರಾಮ್ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮೆರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು, ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರತಿಭಟನೆ ಜೋರಾಗಿ ನಡೆಯುತ್ತಿದೆ. ನಾಳೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ : ಮದ್ದೂರು ಉದ್ವಿಗ್ನ – ನಿಷೇದಾಜ್ಞೆ ನಡುವೆಯೂ ಹಿಂದೂಪರ ಕಾರ್ಯಕರ್ತರಿಂದ ಭಾರೀ ಪ್ರೊಟೆಸ್ಟ್.. ಪೊಲೀಸರಿಂದ ಲಾಠಿಚಾರ್ಜ್​!

 

Btv Kannada
Author: Btv Kannada

Read More