ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ವಿಸರ್ಜನೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಘಟನೆ ತೀವ್ರ ಸಾಮಾಜಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯಿಂದ ಹಿಂದುಪರ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದು, ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಸ್ಥಳದಲ್ಲಿ ಸದ್ಯ ತೀವ್ರ ಬಿಗುವಿನ ವಾತಾವರಣವನ್ನು ಸೃಷ್ಟಿಯಾಗಿದೆ.
ಈ ಹಿನ್ನೆಲೆ ಮದ್ದೂರಿನಲ್ಲಿ ಪೊಲೀಸರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಈಗಾಗಲೇ ಒಂದೂವರೆ ಸಾವಿರಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮಂಡ್ಯ, ಬೆಂಗಳೂರು, ಮೈಸೂರು ಹಾಸನ, ರಾಮನಗರ, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದ್ದಾರೆ.
ಇದೀಗ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸಿದ ಎಸ್ಪಿಗಳಿಗೆ DG-IGP ಸಲೀಂ ಅವರು ಬುಲಾವ್ ನೀಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿರುವ ಎಸ್ಪಿ ಹಾಗೂ ಡಿಸಿಪಿಗೆ ಮದ್ದೂರಿಗೆ ತೆರಳುವಂತೆ ಸೂಚನೆ ಕೊಟ್ಟಿದ್ದಾರೆ. DG-IGP ಸಲೀಂ ಅವರು ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ಮದ್ದೂರಿಗೆ ತೆರಳುವಂತೆ ಸೂಚನೆ ನೀಡಿದ್ದಾರೆ. DG-IGP ಕರೆ ಬರುತ್ತಿದ್ದಂತೆ ಪೊಲೀಸರು ಮದ್ದೂರು ಕಡೆ ಹೊರಟಿದ್ದಾರೆ.
ಇದನ್ನೂ ಓದಿ : ಮದ್ದೂರಿನಲ್ಲಿ ಗಲಾಟೆ ಮಾಡಿದವರನ್ನು ಅರೆಸ್ಟ್ ಮಾಡಿದ್ದೇವೆ – ಡಾ.ಜಿ ಪರಮೇಶ್ವರ್!







