ಬೆಂಗಳೂರು : ಕರ್ನಾಟಕ ಸರ್ಕಾರದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಕಂದಾಯ ಇಲಾಖೆಯಲ್ಲಿರುವ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಖುದ್ದು ಮುಂದಾಗಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕಂದಾಯ ಇಲಾಖೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಬಾಕಿ ಇದ್ದು, ಅವೆಲ್ಲವನ್ನು ಪರಿಹರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೆಂಗಳೂರು, ಕೋಲಾರ ಸೇರಿ ರಾಜ್ಯದಿಂದ ಪ್ರವಾಸ ಮಾಡಿ ಕಂದಾಯ ಇಲಾಖೆಯ ಸ್ಥಿತಿಗತಿಗಳನ್ನು ಅವಲೋಕನ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಎಸಿ (ಉಪವಿಭಾಗಾಧಿಕಾರಿ) ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಂಬಂಧಿಸಿ ಸಚಿವ ಕೃಷ್ಣ ಬೈರೇಗೌಡ ಇಂದು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.

ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಬೆಂಗಳೂರು ಉತ್ತರ ಹಾಗೂ ಬೆಂ. ದಕ್ಷಿಣ ಎಸಿ (ಉಪವಿಭಾಗಾಧಿಕಾರಿ) ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಂಬಂಧಿಸಿ ಇಂದು ಅಧಿಕಾರಿಗಳ ಜೊತೆ ಚರ್ಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : 10 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ – ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಲೇಬರ್ ಆಫೀಸರ್ ಶ್ಯಾಮ್ ರಾವ್!







