ಬೆಂಗಳೂರು : ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದ ಬಳಿಕ ಮದ್ದೂರು ಬೂದಿ ಮುಚ್ಚಿದ ಕೆಂಡದಂತೆ ಇದೆ. ಈ ದುರ್ಘಟನೆ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು.

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ನಿಯೋಗವು ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಕುರಿತು ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರೊಂದಿಗೆ ಚರ್ಚೆ ನಡೆಸಿ, ಪ್ರಕರಣದ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವ ಸಿ. ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ : 3 ಕೋಟಿ ವಂಚನೆ ಪ್ರಕರಣ – ಹೈಕೋರ್ಟ್ನಿಂದ ಧ್ರುವ ಸರ್ಜಾಗೆ ಬಿಗ್ ರಿಲೀಫ್!
Author: Btv Kannada
Post Views: 442







