ಡಾ. ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ಘೋಷಣೆ!

ಬೆಂಗಳೂರು : ಸಾಹಸಸಿಂಹ ಡಾ.ವಿಷ್ಣುವರ್ಧನ್​​ ಹಾಗೂ ನಟಿ ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಡಾ.ವಿಷ್ಣುವರ್ಧನ್​​ ಹಾಗೂ ನಟಿ ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಲು ಮಹತ್ವದ ನಿರ್ಧಾರ ಮಾಡಿದ್ದಾರೆ.

ವಿಷ್ಣುವರ್ಧನ್ ಅವರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅದೇ ರೀತಿ ಬಿ. ಸರೋಜಾದೇವಿ ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ಕುಟುಂಬದವರ ಮತ್ತು ಅಭಿಮಾನಿಗಳ ಮನವಿ ಆಗಿತ್ತು. ಇಂದು ಡಾ. ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.

ಇನ್ನು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ರಾಷ್ಟ್ರ ಕವಿ ಕುವೆಂಪು ಅವರಿಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಶಿಫಾರಸ್ಸು ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ ಆಪರೇಷನ್ ಕ್ಲೀನ್ – ವಾಣಿಜ್ಯ ಕಟ್ಟಡ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಆಯುಕ್ತರ ಸೂಚನೆ!

Btv Kannada
Author: Btv Kannada

Read More