ಡೆಹ್ರಾಡೂನ್ : ಪ್ರವಾಹ ಮತ್ತು ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಉತ್ತರಾಖಂಡಕ್ಕೆ ಭೇಟಿ ನೀಡಿದ್ದಾರೆ.
ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿನ ಸಿಎಂ ಪುಷ್ಕರ್ ಸಿಂಗ್ ಧಾಮಿ, ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರುಪ್ರೀತ್ ಸಿಂಗ್ ಸ್ವಾಗತಿಸಿದರು. ತಮ್ಮ ಭೇಟಿಯ ಸಮಯದಲ್ಲಿ ಮೋದಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಅಲ್ಲದೇ ಪ್ರವಾಹ ಪೀಡಿತ ಕುಟುಂಬಗಳೊಂದಿಗೆ ಸಂವಾದ ನಡೆಸಿದ್ದಾರೆ. ಇದೇ ವೇಳೆ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ 1,200 ಕೋಟಿ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದ್ದಾರೆ.

ಅಲ್ಲದೇ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಸಹ ಘೋಷಿಸಿದ್ದಾರೆ. ಪ್ರವಾಹ ಮತ್ತು ಭೂಕುಸಿತದಿಂದ ಅನಾಥರಾದ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯಡಿಯಲ್ಲಿ ಸಂಪೂರ್ಣ ಸಹಾಯ ನೀಡುವುದಾಗಿ ಮೋದಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಮದ್ದೂರು ಗಣೇಶ ವಿಸರ್ಜನೆ ವೇಳೆ ಲಾಠಿ ಏಟು ತಿಂದ ಮಹಿಳೆ ವಿರುದ್ಧ FIR!







