ಮಂಡ್ಯ : ಮದ್ದೂರು ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ಮದ್ದೂರು ಸರ್ಕಲ್ ಇನ್‌ಸ್ಪೆಕ್ಟರ್ ಶಿವಕುಮಾರ್ ಅವರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಆದೇಶ ಹೊರಡಿಸಿದ್ದಾರೆ.
ಇನ್ನೂ ಈ ಮೊದಲು ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಮಾಡಿದ ಗೃಹ ಇಲಾಖೆ ಇನ್ನೂ ಯಾವುದೇ ಸ್ಥಳ ಸೂಚಿಸಿಲ್ಲ.
ಮದ್ದೂರು ಪ್ರಕರಣದಲ್ಲಿ ತಿಮ್ಮಯ್ಯಗೆ ಹೆಚ್ಚುವರಿ ಜವಾಬ್ದಾರಿ ನೀಡಿರಲಿಲ್ಲ. ಆದ್ರೂ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಲ್ಲು ತೂರಾಟ ತಡೆಯಬೇಕಿದ್ದು ಮದ್ದೂರು ಇನ್‌ಸ್ಪೆಕ್ಟರ್ ಹಾಗೂ ಇತರ ಪೊಲೀಸರ ಕರ್ತವ್ಯವಾಗಿತ್ತು. ಪ್ರತಿಭಟನೆ ಬಂದೋಬಸ್ತ್ ನೇತೃತ್ವ ವಹಿಸಿದ್ದು ಎಸ್ಪಿ, ಬಂದೋಬಸ್ತ್ ಕೆಲಸ ಮಾಡಿದ್ರು. ಹೀಗಿದ್ದರೂ ಸಹ ಅಮಾಯಕ ಅಧಿಕಾರಿಯನ್ನು ಸರ್ಕಾರ ಬಲಿಪಶು ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ : ಸೆ. 22ರಿಂದ ಅ.7ರವರೆಗೆ ಜಾತಿಗಣತಿ ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ!







