ಸಿನಿ ಪ್ರಿಯರಿಗೆ ಗುಡ್​ನ್ಯೂಸ್.. ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಥಿಯೇಟರ್​ಗಳಲ್ಲಿ 200 ರೂ. ಏಕರೂಪ ಟಿಕೆಟ್ ದರ ಜಾರಿ!

ಬೆಂಗಳೂರು : ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಸಿನಿಮಾ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲ ಥಿಯೇಟರ್​ಗಳಲ್ಲಿ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ.

ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷೆಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್‌ ದರ 200 ರೂ. ಮೀರದಂತೆ ಆದೇಶದಲ್ಲಿ ತಿಳಿಸಿದೆ. 75 ಆಸನಗಳು ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರಿಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರ ಮಂದಿರಗಳನ್ನು ನಿಗದಿಪಡಿಸಿರುವ 200 ರೂ.ಗಳ ಗರಿಷ್ಠ ಟಿಕೆಟ್‌ ದರ ಮಿತಿಯಿಂದ ಹೊರಗಿಟ್ಟಿದೆ.

ಇನ್ನು ಕೆಲವು ಷರತ್ತುಗಳನ್ನು ಕೂಡ ಸರ್ಕಾರ ಹೇರಿದೆ. ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಗೋಲ್ಡ್ ಕ್ಲಾಸ್ ವ್ಯವಸ್ಥೆ ಇರುತ್ತವೆ. ಇವುಗಳಿಗೆ 200 ರೂಪಾಯಿ ಟಿಕೆಟ್ ದರದ ಮಿತಿ ಇಲ್ಲ. ಆ ಆಸನಗಳಿಗೆ ಮಲ್ಟಿಪ್ಲೆಕ್ಸ್​ಗಳು ತಮ್ಮಿಷ್ಟದ ದರ ನಿಗದಿ ಮಾಡಬಹುದು. ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ರಿಕ್ಲೈನ್ ಸೀಟ್​ಗಳು ಇರುತ್ತವೆ. ಅವುಗಳಿಗೂ 200 ರೂಪಾಯಿ ಟಿಕೆಟ್ ದರ ಅನ್ವಯ ಆಗುತ್ತದೆ ಎನ್ನಲಾಗಿದೆ. ಸದ್ಯ ಟಿಕೆಟ್ ಮಂದಿರಗಳಿಗೆ ಆದೇಶ ಪ್ರತಿ ತಲುಪಿಲ್ಲ. ಇದು ತಲುಪಿದ ಬಳಿಕ ನಿಯಮ ಜಾರಿಗೆ ಬರಲಿದೆ.

ಇದನ್ನೂ ಓದಿ : ಅಕ್ರಮ ಬೆಟ್ಟಿಂಗ್ ದಂಧೆಯಿಂದ ‘ಬಂಗಾರ’ದ ಮನುಷ್ಯನಾದ ಪಪ್ಪಿ.. ಕಾಂಗ್ರೆಸ್​ನಿಂದ ವಜಾ ಯಾವಾಗ? – ಬಿಜೆಪಿ ಟೀಕೆ!

Btv Kannada
Author: Btv Kannada

Read More