ಬೆಂಗಳೂರು : ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರು ಇಂದು ಬೆಂಗಳೂರಿನಲ್ಲಿ ಮಧ್ಯಪ್ರದೇಶದ ವಿಧಾನಸಭಾಧ್ಯಕ್ಷ ಹಾಗೂ ಕೇಂದ್ರ ಸರ್ಕಾರದ ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿದ್ದಾರೆ.

ನರೇಂದ್ರ ಸಿಂಗ್ ತೋಮರ್ ಅವರು ನಿನ್ನೆ ವಿಧಾನಸೌಧದಲ್ಲಿ ಪ್ರಾರಂಭವಾದ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಕರ್ನಾಟಕ ಶಾಖೆಯ ವತಿಯಿಂದ ಆಯೋಜಿಸಲಾಗಿದ್ದ 11ನೇ CPA ಭಾರತ ವಲಯದ ಸಮ್ಮೇಳನಕ್ಕೆ ಆಗಮಿಸಿದ್ದಾರೆ.

ನರೇಂದ್ರ ಸಿಂಗ್ ತೋಮರ್ ಅವರು ಕೇಂದ್ರದ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾಗ ಮತ್ತು ಭಾರತೀಯ ಜನತಾ ಪಾರ್ಟಿಯು ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸುವ ಸಂದರ್ಭದಲ್ಲಿ ಅವರೊಂದಿಗೆ ಪಕ್ಷದ ಕೆಲಸ ಮಾಡುವ ಅವಕಾಶ ಅರವಿಂದ್ ಲಿಂಬಾವಳಿ ಅವರಿಗೆ ಲಭಿಸಿತ್ತು. ಅದನ್ನು ಸ್ಮರಿಸಿ, ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಅರವಿಂದ್ ಲಿಂಬಾವಳಿಗೆ ಕರೆ ಮಾಡಿ ಭೇಟಿ ಆಗೋಣ ಎಂದು ಆಹ್ವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಭೇಟಿ ಮಾಡಿ, ಪಕ್ಷದ ಹಿಂದಿನ ಹಾಗೂ ಇಂದಿನ ವಿಚಾರಗಳನ್ನು ಮೆಲುಕು ಹಾಕಿದ್ದಾರೆ.
Author: Btv Kannada
Post Views: 280







