ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ.. ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ!

ಹಾಸನ : ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ನಗರದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ವಿವರ :
1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
2. ರಾಜೇಶ ಬಿನ್ ಮೂರ್ತಿ 17 ವರ್ಷ ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
3. ಈಶ್ವರ ಬಿನ್ ರವಿಕುಮಾರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲೂಕು
4. ಗೋಕುಲ ಬಿನ್ ಸಂಪತ್ ಕುಮಾರ್ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
5. ಕುಮಾರ ಬಿನ್ ತಿಮ್ಮಯ್ಯ (25 ) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
6. ಪ್ರವೀಣ ಬಿನ್ ಹನುಮಯ್ಯ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
7. ಮಿಥುನ್ ಬಿನ್ ವಿಜಯ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
8. ಸುರೇಶ ಬಿನ್ ರಮೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
9. ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು

ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಘೋಷಣೆ : ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಘಟನೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಝೈದ್ ಖಾನ್ ನಟನೆಯ ‘ಕಲ್ಟ್’ ಚಿತ್ರದ “ಅಯ್ಯೊ ಶಿವನೇ” ಹಾಡಿಗೆ ಅಭಿಮಾನಿಗಳು ಫಿದಾ!

 

 

Btv Kannada
Author: Btv Kannada

Read More