ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ.. ವಾಹನಗಳು, ಕೃಷಿ ಭೂಮಿಗೆ ಅಪಾರ ಹಾನಿ!

ಶಿಮ್ಲಾ : ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗಿನ ಜಾವ ಮತ್ತೆ ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಕೃಷಿ ಭೂಮಿಗೂ ಹಾನಿ ಉಂಟಾಗಿದೆ.

ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ ಗುತ್ರಹಾನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ವರದಿಯಾಗಿದೆ.

ಸದ್ಯ ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು ಆವರಿಸಿದ್ದು, ಕಡಿಮೆ ಗೋಚರತೆಯ ಪರಿಣಾಮ ವಾಹನ ಸವಾರರು ಪರದಾಡವಂತಾಗಿದೆ. ಇಂದು ಮತ್ತು ನಾಳೆ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ಹಣ ಕಳ್ಳತನ – ದೂರು ದಾಖಲು!

Btv Kannada
Author: Btv Kannada

Read More