ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ 5 ಕೋಟಿ ದೇಣಿಗೆ ನೀಡಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಹಿಮಾಚಲ ಪ್ರದೇಶದಲ್ಲಿ ಪ್ರವಾಹ ಪೀಡಿತದಿಂದಾಗಿ ನೂರಾರು ಮಂದಿ ಮೃತಪಟ್ಟಿದ್ದು, ಈ ನೈಸರ್ಗಿಕ ದುರಂತಕ್ಕೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಅವರು ಹಿಮಾಚಲ ಪ್ರದೇಶಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ.

<iframe src="https://www.facebook.com/plugins/post.php?href=https%3A%2F%2Fwww.facebook.com%2FSiddaramaiah.Official%2Fposts%2Fpfbid02iPxbqc9j6nJDtx9E18ZUKjeX9va1CU175fi95K22RxKjJrAdRwzRzunub9mLrZWEl&show_text=true&width=500" width="500" height="717" style="border:none;overflow:hidden" scrolling="no" frameborder="0" allowfullscreen="true" allow="autoplay; clipboard-write; encrypted-media; picture-in-picture; web-share"></iframe>

ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ.

ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ.

ಇನ್ನು, ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಹಣವನ್ನು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದನ್ನೂ ಓದಿ : ಜಾತಿ ಗಣತಿಯಲ್ಲಿ ವೀರಶೈವ, ಲಿಂಗಾಯತ ಗೊಂದಲ ಬಗೆಹರಿಸಿ – ಸಂಸದ ಬೊಮ್ಮಾಯಿ ಆಗ್ರಹ!

Btv Kannada
Author: Btv Kannada

Read More