ಹೊಸಕೋಟೆ : ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.
ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದೃಷ್ಟವಶಾತ್ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡ ಶಿವು (32), ಮಗಳು ಚಂದ್ರಕಳಾ (11) ಮಗ ಉದಯ್ ಸೂರ್ಯ (07) ಸಾವನ್ನಪ್ಪಿದ್ದಾರೆ.
ತನ್ನ ಸಹೋದರ ಶಿವು ಅವರ ಸಾವಿಗೆ ಮಂಜುಳಾ ಕಾರಣ ಎಂದು ಆರೋಪಿಸಿ, ಶಿವು ಸಹೋದರಿ ಆಶಾ ದೂರು ನೀಡಿದ್ದಾರೆ. ಗಂಡನ ಕುತ್ತಿಗೆಗೆ ವೇಲ್ ಬಿಗಿದು ಹಾಗೂ ಇಬ್ಬರು ಮಕ್ಕಳ ಕುತ್ತಿಗೆ ಬಿಗಿದು ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ದೂರಿನಲ್ಲಿ ಆಶಾ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮಂಜುಳಾ ಅವರನ್ನು ಹೊಸಕೋಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಡಾರ್ಲಿಂಗ್ ಕೃಷ್ಣ ನಟನೆಯ ಬ್ರ್ಯಾಟ್ ಚಿತ್ರದ “ಗಂಗಿ ಗಂಗಿ” ಸಾಂಗ್ ರಿಲೀಸ್ – ಬಾಳು ಬೆಳಗುಂದಿ ಸಾಹಿತ್ಯ, ಗಾಯನಕ್ಕೆ ಫ್ಯಾನ್ಸ್ ಫಿದಾ!







