ದುಬೈ : 2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಬದ್ಧವೈರಿ ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಭರ್ಜರಿಯಾಗಿ 7 ವಿಕೆಟ್ಗಳಿಂದ ಗೆದ್ದು ಬೀಗಿದೆ. 128 ರನ್ಗಳ ಟಾರ್ಗೆಟ್ ಅನ್ನು ಸೂರ್ಯಕುಮಾರ್ ಪಡೆ ಸುಲಭವಾಗಿಯೇ ತಲುಪಿ ಜಯ ಪಡೆದುಕೊಂಡಿದೆ.

ಇನ್ನೂ ಪಂದ್ಯ ಗೆದ್ದ ಬಳಿಕ ಮಾತನಾಡಿದ ಭಾರತ ತಂಡದ ಕ್ಯಾಪ್ಟನ್ ಸೂರ್ಯಕುಮಾರ್, ಇದೊಂದು ಪರಿಪೂರ್ಣ ಸಂದರ್ಭ ಎಂದು ನಾನು ಭಾವಿಸುತ್ತೇನೆ. ಪಹಲ್ಗಾಮ್ ಸಂತ್ರಸ್ತರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸುತ್ತೇವೆ. ಈ ಗೆಲುವನ್ನು ನಮ್ಮ ಎಲ್ಲಾ ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಬಯಸುತ್ತೇವೆ. ಅವರು ನಮಗೆಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಾರೆ ಎಂದು ಆಶಿಸುತ್ತೇವೆ ಎಂದು ತಿಳಿಸಿದ್ದಾರೆ.

ಹ್ಯಾಂಡ್ ಶೇಕ್ ಮಾಡದ ಆಟಗಾರರು : ಪಂದ್ಯ ಆರಂಭದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಅಘಾ ಪರಸ್ಪರ ಹ್ಯಾಂಡ್ ಶೇಕ್ ಮಾಡಲಿಲ್ಲ. ಇಬ್ಬರ ನಡುವೆ ಕಣ್ಣು ಸಂಪರ್ಕವೂ ಆಗಲಿಲ್ಲ. ಪಂದ್ಯ ಮುಗಿದ ನಂತರವೂ ಆಟಗಾರರ ನಡುವೆ ಯಾವುದೇ ರೀತಿಯ ಹ್ಯಾಂಡ್ ಶೇಕ್ ಸಂಪ್ರದಾಯ ನಡೆಯಲಿಲ್ಲ. ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಪ್ರತಿಬಿಂಬಿಸಿದೆ.

ಇದನ್ನೂ ಓದಿ : ಬೆಂಗಳೂರಿಗರೇ ಗಮನಿಸಿ.. ಇಂದಿನಿಂದ 3 ದಿನ ಕಾವೇರಿ ನೀರು ಬರಲ್ಲ – ಜಲಮಂಡಳಿ ಮಾಹಿತಿ!







