ಕೋಲಾರ : ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ, ಇಂದು ಸೇನೆಗೆ ವಾಪಾಸ್ ಆಗುವ ಮುನ್ನವೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ನಡೆದಿದೆ. 36 ವರ್ಷದ ಮುನಿ ನಾರಾಯಣ ಹೃದಯಾಘಾತದಿಂದ ಸಾವನ್ನಪ್ಪಿದ ಯೋಧ.
ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕಳೆದ 17 ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ತಿಂಗಳು ರಜೆಯ ಮೇಲೆ ಊರಿಗೆ ಬಂದಿದ್ದ ಅವರು, ರಾತ್ರಿ ಮಲಗಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಇಂದು ಸ್ವಗ್ರಾಮ ಆಚಂಪಲ್ಲಿ ಗ್ರಾಮದಲ್ಲಿ ಮುನಿ ನಾರಾಯಣ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಯೋಧ ಮುನಿನಾರಾಯಣ ನಿಧನಕ್ಕೆ ಸ್ನೇಹಿತರು ಗ್ರಾಮಸ್ಥರ ಸಂತಾಪ ಸೂಚಿಸಿದ್ದು, ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಪಾಕ್ಗೆ ಗುಮ್ಮಿದ ಟೀಮ್ ಇಂಡಿಯಾ.. ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸೇನೆಗೆ ಅರ್ಪಿಸಿದ ಕ್ಯಾಪ್ಟನ್ ಸೂರ್ಯ!
Author: Btv Kannada
Post Views: 290







