ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ವಜಾ.. ಜಡ್ಜ್ ಮುಂದೆ ಗಳ ಗಳನೆ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ!

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್​ ಬಿಗ್ ಶಾಕ್ ಕೊಟ್ಟಿದೆ.

ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಆರೋಪಗಳನ್ನು ಓದಿ ಹೇಳುವಾಗ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದರು. ನ್ಯಾಯಾಲಯವು ಆರೋಪಗಳನ್ನು ನಿಗದಿಪಡಿಸಿದ್ದು, ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಈ ನಾಲ್ಕು ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ. ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್​ನಲ್ಲಿ 2,144 ಪುಟಗಳ ಚಾರ್ಜ್​​​ಶೀಟ್​ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್​ನಲ್ಲಿ ಕಸರತ್ತು ನಡೆಸಿದ್ದರು.

Btv Kannada
Author: Btv Kannada

Read More

Read More