ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಹೈಕೋರ್ಟ್ ಆದೇಶ ನೀಡಿದ್ದು, ಮರು ಮತ ಎಣಿಕೆಗೆ ನ್ಯಾಯಪೀಠ ಸೂಚನೆ ನೀಡಿದೆ.
ಕೆವೈ ನಂಜೇಗೌಡ ಆಯ್ಕೆ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ಕೆಎಸ್ ಮಂಜುನಾಥಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಮತಎಣಿಕೆಯಲ್ಲಿ ಲೋಪವಾಗಿದ್ದು, ಮತ್ತೊಮ್ಮೆ ಮರು ಮತಎಣಿಕೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿರೋ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ.
ಹೊಸದಾಗಿ ಮರು ಮತಎಣಿಕೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ತೀರ್ಪಿಗೆ ಮಧ್ಯಂತರ ತಡೆ ನೀಡಲು K.Y.ನಂಜೇಗೌಡ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಕಂದಾಯ ಇಲಾಖೆಯ ಭ್ರಷ್ಟಾಚಾರಕ್ಕೆ ಸಿಡಿದೆದ್ದ ವಕೀಲರು.. ಬೆಂಗಳೂರು ಉತ್ತರ AC ಕಿರಣ್, ದಕ್ಷಿಣ AC ವಿಶ್ವನಾಥ್ ವಿರುದ್ದ ಕ್ರಮಕ್ಕೆ ಆಗ್ರಹ!







