ಮುಡಾ ಹಗರಣ ಕೇಸಲ್ಲಿ ಮಹತ್ವದ ಬೆಳವಣಿಗೆ.. ಮಾಜಿ ಆಯುಕ್ತ ಜಿ.ಟಿ ದಿನೇಶ್‌ ಕುಮಾರ್ ಬಂಧನ!

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ (MUDA Scam) ಕೇಸ್​ ಸಂಬಂಧ ಮಾಜಿ ಆಯುಕ್ತ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಂಧಿಸಿದ್ದಾರೆ.

ಮುಡಾ ಕೇಸ್‌ನಲ್ಲಿ ವಿಚಾರಣೆಗೆ ಕರೆದಿದ್ದರಿಂದ ನಿನ್ನೆ ಬೆಂಗಳೂರಿನ ಶಾಂತಿನಗರದಲ್ಲಿ ED ಕಚೇರಿಗೆ ದಿನೇಶ್ ಕುಮಾರ್ ಆಗಮಿಸಿದ್ದರು. ವಿಚಾರಣೆ ವೇಳೆ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆ KAS ಅಧಿಕಾರಿ ಜಿ.ಟಿ.ದಿನೇಶ್ ಅವರನ್ನು ಬಂಧಿಲಾಗಿದೆ. ಸದ್ಯ ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಬೇಕಿದೆ.

ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್‌ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್​ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿನೇಶ್ ಅವರಿಗೆ ಸೇರಿದ ಆಸ್ತಿಯನ್ನೂ ಜಪ್ತಿ ಮಾಡಿದ್ದಾರೆ.

ಇನ್ನು 2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್‌ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು. ಕುಲಸಚಿವ ಹುದ್ದೆಯನ್ನು ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸರ್ಕಾರ ಕೊನೆಗೆ ಆ ಆದೇಶವನ್ನೇ ರದ್ದು ಮಾಡಿತ್ತು.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ!

Btv Kannada
Author: Btv Kannada

Read More