“ಸ್ವಸ್ಥ ನಾರಿ ಸ್ವಶಕ್ತ ಪರಿವಾರ” ಅಭಿಯಾನ ಕಾರ್ಯಕ್ರಮ – ವೇದಿಕೆಯಲ್ಲಿ ಬಿದ್ದಿದ್ದ ಕಸ ಸ್ವಚ್ಛಗೊಳಿಸಿದ ಸಚಿವ ಪ್ರಹ್ಲಾದ್ ಜೋಶಿ!

ಧಾರವಾಡ : ದೇಶದ ಮಹಿಳೆಯರು ಮತ್ತು ಮಕ್ಕಳಿಗಾಗಿ ಪ್ರಧಾನಿ ಮೋದಿ ಅವರು ತಮ್ಮ ಜನ್ಮ ದಿನದಂದು “ಸ್ವಸ್ಥ ನಾರಿ ಸಶಕ್ತ ಪರಿವಾರ” ಎಂಬ ರಾಷ್ಟ್ರವ್ಯಾಪಿ ಆರೋಗ್ಯ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕಲಘಟಗಿಯಲ್ಲಿ ತಾಲೂಕು ಆಸ್ಪತ್ರೆ ಆವರಣದಲ್ಲಿ “ಸ್ವಸ್ಥ ನಾರಿ ಸ್ವಶಕ್ತ ಪರಿವಾರ” ಅಭಿಯಾನದ ಪ್ರಧಾನಿ ನರೇಂದ್ರ ಮೋದಿಯವರ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಿದ್ದಾರೆ.

ಈ ವೇಳೆ ವೇದಿಕೆಯಲ್ಲಿ ಪೌರ ಕಾರ್ಮಿಕರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಎಸ್​ಪಿ, ಡಿಹೆಚ್​ಒ ಹೀಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಆದರೂ ಸಚಿವ ಪ್ರಹ್ಲಾದ್ ಜೋಶಿ ಅವರು ತಾವೇ ಖುದ್ದು ವೇದಿಕೆ ಮೇಲೆ ಬಿದ್ದಿದ್ದ ಕಸವನ್ನು ಸ್ವಚ್ಛ ಮಾಡಿದ್ದಾರೆ.

ಇದನ್ನೂ ಓದಿ : ಹಾವೇರಿ : ಮಣ್ಣು ಅಗೆದ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು!

Btv Kannada
Author: Btv Kannada

Read More