ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ಆರೋಪ ಸಂಬಂಧ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತಿದ್ದ ನಿರಂಜನಾ ಮೂರ್ತಿ, ಯೋಗ ಸೆಂಟರ್ಗೆ ಬರ್ತಿದ್ದ ಹದಿನೇಳು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಅಡಿಯಲ್ಲಿ ಅರೆಸ್ಟ್ ಮಾಡಲಾಗಿದೆ.
ಯೋಗ ಗುರು ನಿರಂಜನಾ ಮೂರ್ತಿ ಬಾಲಕಿ ಬಳಿ ‘ನಿನಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡ್ತೀನಿ, ಆದರಿಂದ ಸರ್ಕಾರಿ ಕೆಲಸವೂ ಸಿಗಬಹುದು’ ಎಂದು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇನ್ನೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ಕೇಸ್ ದಾಖಲಾಗಿತ್ತಿದ್ದಂತೆ ತಲೆಮರಿಸಿಕೊಂಡಿದ್ದ ನಿರಂಜನಾ ಮೂರ್ತಿಯನ್ನು ಇದೀಗ ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ – ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ದ FIR ದಾಖಲಿಸಲು ಕೋರ್ಟ್ ಆದೇಶ!







