ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆ ವಿವಾಹ ಆರೋಪ – ಯೂಟ್ಯೂಬರ್ ಮುಕಳೆಪ್ಪನ ವಿರುದ್ಧ ದೂರು!

ಧಾರವಾಡ : ಕನ್ನಡದ ಜಯಪ್ರಿಯ ಯೂಟ್ಯೂಬರ್ ಖ್ವಾಜಾ @ ಮುಕಳೆಪ್ಪ ವಿರುದ್ಧ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನು ವಿವಾಹವಾದ ಆರೋಪ ಕೇಳಿಬಂದಿದೆ. ಈ ಸಂಬಂಧ ಖ್ವಾಜಾ @ ಮುಕಳೆಪ್ಪ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಕಳೆಪ್ಪ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದು, ಸದ್ಯ ಗ್ರಾಮೀಣ ಪೊಲೀಸರು ಮುಕಳೆಪ್ಪ, ಆತನ ಪತ್ನಿ ಗಾಯತ್ರಿಯನ್ನು ವಿಚಾರಣೆ ನಡೆಸಿದ್ದಾರೆ. ಹಿಂದೂ ಯುವತಿಯನ್ನ ಪುಸಲಾಯಿಸಿ ಮದುವೆಯಾಗಿದ್ದಾನೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ದೂರಿನ ಪ್ರಕಾರ, ಜೂನ್ 5, 2025ರಂದು ಮುಕಳೆಪ್ಪ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್‌ ರಿಜಿಸ್ಟರ್ ಕಚೇರಿಯಲ್ಲಿ ಹಿಂದೂ ಯುವತಿಯಾದ ಗಾಯತ್ರಿಯನ್ನು ವಿವಾಹವಾಗಿದ್ದಾನೆ. ಈ ವಿವಾಹಕ್ಕಾಗಿ, ಆತ ತನ್ನ ವಿಳಾಸವನ್ನು ಶಿರಹಟ್ಟಿ ಗಾಂಧಿನಗರ ಎಂದು ನಮೂದಿಸಿ ನಕಲಿ ದಾಖಲೆಗಳನ್ನು ನೀಡಿದ್ದಾನೆ ಎಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ. ಮುಕಳೆಪ್ಪ ಹಿಂದೂ ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ವಂಚನೆ ಮಾಡುತ್ತಿದ್ದಾನೆ ಎಂದು ಅವರು ಹೇಳಿದ್ದಾರೆ.

ಹಿಂದೂ ಧರ್ಮಕ್ಕೆ ಅವಮಾನ ಆರೋಪ : ಖ್ವಾಜಾ ಅಲಿಯಾಸ್ ಮುಕಳೆಪ್ಪ ಹಿಂದೂ ಯುವತಿಯರೊಂದಿಗೆ ಹೆಚ್ಚಾಗಿ ವಿಡಿಯೋಗಳನ್ನು ಮಾಡುತ್ತಾನೆ. ಆತನ ವಿಡಿಯೋಗಳಲ್ಲಿ ಹಿಂದೂ ಧರ್ಮ ಮತ್ತು ಆಚರಣೆಗಳನ್ನು ಅವಮಾನಿಸುವ ಅಂಶಗಳಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಿಂದುತ್ವ ಮತ್ತು ಹಿಂದೂ ಹೆಣ್ಣುಮಕ್ಕಳನ್ನು ಟಾರ್ಗೆಟ್ ಮಾಡಿ ಮುಕಳೆಪ್ಪ ಇಂತಹ ವಿಡಿಯೋಗಳನ್ನು ಮಾಡುತ್ತಿದ್ದಾನೆ ಎಂದು ಆರೋಪಿಸಿರುವ ಬಜರಂಗದಳದ ಸಂಚಾಲಕ ಸಿದ್ದು ಹಿರೇಮಠ ಮತ್ತು ಕಾರ್ಯಕರ್ತ ಶಂಕರ್, ಇಂತಹ ವಿಡಿಯೋಗಳು ಸಮಾಜದಲ್ಲಿ ಧಾರ್ಮಿಕ ಅಶಾಂತಿಯನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮೈಸೂರು : ಪ್ರೇಮ ವೈಫಲ್ಯದಿಂದ ಮನನೊಂದು ಯುವತಿ ಆತ್ಮಹತ್ಯೆ!

Btv Kannada
Author: Btv Kannada

Read More