ಬೆಂಗಳೂರು : ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್‌ಗಳು ಮತ್ತು ಚಿತ್ರಮಂದಿರಗಳಲ್ಲಿ 200 ರೂಪಾಯಿ ಏಕರೂಪದ ಸಿನಿಮಾ ಟಿಕೆಟ್ ದರವನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ರಾಜ್ಯಾದ್ಯಂತ ಸಿನಿಮಾ ಟಿಕೆಟ್ ದರವನ್ನು ಗರಿಷ್ಠ 200 ರೂ.ಗೆ ಮಿತಿಗೊಳಿಸಿದ ಕೆಲವು ದಿನಗಳ ನಂತರ, ಮಲ್ಟಿಪ್ಲೆಕ್ಸ್ ಮಾಲೀಕರು ಈ ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸೆ.16ರಂದು ಸುದೀರ್ಘ ವಾದ-ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಮಧ್ಯಂತರ ತೀರ್ಪು ಕಾಯ್ದಿರಿಸಿತ್ತು.
ಇದೀಗ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ನ್ಯಾ. ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಚಾಮುಂಡಿ ಬೆಟ್ಟದ ಅರ್ಚಕ ನಿಧನ – ದೇವಿಯ ದರ್ಶನಕ್ಕೆ ಮಧ್ಯಾಹ್ನದವರೆಗೆ ನಿರ್ಬಂಧ!
Author: Btv Kannada
Post Views: 615







