ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿದ್ದಾರೆ.
ವಿಚಾರಣೆಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಕೇಂದ್ರ ಕಚೇರಿಗೆ ಜಮೀರ್ ಹಾಜರಾಗಿದ್ದರು. ಸಚಿವ ಜಮೀರ್ ಅಹಮದ್ ಸುಮಾರು ಎರಡೂವರೆ ತಾಸು ವಿಚಾರಣೆ ಎದುರಿಸಿದ್ದಾರೆ.
ನಾನು ಕಾನೂನು ಬದ್ಧವಾಗಿ ಹಣಕಾಸು ವ್ಯವಹಾರ ನಡೆಸಿದ್ದೇನೆ. ಹಲವು ವರ್ಷಗಳಿಂದ ಸಾರಿಗೆ ಉದ್ಯಮದಲ್ಲಿ ತೊಡಗಿದ್ದೆ. ಆದರೆ ಅಕ್ರಮವಾಗಿ ಆಸ್ತಿ ಸಂಪಾದಿಸಿಲ್ಲ. ನನ್ನ ಮೇಲೆ ಸುಖಾಸುಮ್ಮನೆ ಆರೋಪ ಮಾಡಲಾಗಿದೆ. ಪ್ರತಿ ವರ್ಷ ಆದಾಯ ತೆರಿಗೆ ಪಾವತಿಸಿದ್ದೇನೆ. ಚುನಾವಣೆ ವೇಳೆ ಸಲ್ಲಿಸಿದ್ದ ಅಪಿಢವಿಟ್‌ನಲ್ಲಿ ಕೂಡ ಎಲ್ಲ ವಿವರ ಕೊಟ್ಟಿದ್ದೇನೆ ಎಂದು ಲೋಕಾಯುಕ್ತ ಪೊಲೀಸರಿಗೆ ಸಚಿವ ಜಮೀರ್ ವಿವರಣೆ ನೀಡಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದಡಿ ಜಮೀರ್ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಚಿವರ ಆದಾಯದ ಮೂಲ ಶೋಧಿಸುತ್ತಿರುವ ಪೊಲೀಸರು, ಈಗಾಗಲೇ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ನಟಿ ರಾಧಿಕಾ ಕುಮಾರಸ್ವಾಮಿ, ಸಚಿವ ದಿನೇಶ್ ಗೂಂಡಾರಾವ್, ಉದ್ಯಮಿ ಕೆಜಿಎಫ್ ಬಾಬು ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಕುಪ್ಪೇಂದ್ರ ರೆಡ್ಡಿ ಸೇರಿ ಹಲವು ಮಂದಿಗೆ ತನಿಖೆ ಬಿಸಿ ತಟ್ಟಿದೆ.
ಇದನ್ನೂ ಓದಿ : ‘ಕಾಂತಾರ ಚಾಪ್ಟರ್ 1’ ಟ್ರೈಲರ್ಗೆ ಭಾರೀ ಮೆಚ್ಚುಗೆ.. ಕಥೆಯ ಸಿದ್ದತೆ ಹಿಂದಿನ ಸತ್ಯ ಬಿಚ್ಚಿಟ್ಟ ನಟ ರಿಷಬ್ ಶೆಟ್ಟಿ!







