ಬೆಳಗಾವಿಯಲ್ಲಿ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿಯಿಟ್ಟ ಗ್ರಾಮಸ್ಥರು!

ಬೆಳಗಾವಿ : ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಗ್ರಾಮಸ್ಥರು ಬೆಂಕಿ ಇಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದ್ರಾಬಾದ್‌ಗೆ ಸಾಗಿಸುತ್ತಿದ್ದ ಅಂದಾಜು ಏಳು ಕ್ವಿಂಟಲ್ ಗೋಮಾಂಸ ಸಮೇತ ವಾಹನ ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾಗಿದೆ.

ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ತಿಳಿದ ಗ್ರಾಮಸ್ಥರು ವಾಹನವನ್ನ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಈ ವೇಳೆ ವಾಹನದಲ್ಲಿ 7 ಕ್ವಿಂಟಲ್‌ನಷ್ಟು ಗೋಮಾಂಸ ಇರುವುದು ಕಂಡುಬಂದಿದೆ. ಇದರಿಂದ ಕುಪಿತಗೊಂದ ಗ್ರಾಮಸ್ಥರು ಚಾಲಕನನ್ನು ಹೊರಗೆಳೆದು ಥಳಿಸಿ, ಕೂಡಿಹಾಕಿದ್ದಾರೆ. ಬಳಿಕ ಗೋಮಂಸ ಸಮೇತ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.

ಘಟನೆಯ ಸ್ಥಳಕ್ಕೆ ಕಾಗವಾಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐನಾಪುರ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಸ್ಥಳದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ‘ಕಾಂತಾರ ಚಾಪ್ಟರ್ 1’ ಟ್ರೈಲರ್​ಗೆ ಭಾರೀ ಮೆಚ್ಚುಗೆ.. ಕಥೆಯ ಸಿದ್ದತೆ ಹಿಂದಿನ ಸತ್ಯ ಬಿಚ್ಚಿಟ್ಟ ನಟ ರಿಷಬ್ ಶೆಟ್ಟಿ!

Btv Kannada
Author: Btv Kannada

Read More