ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ.. ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು : ಸ್ವಲ್ವ ಬ್ರೇಕ್​​ ತಗೊಂಡಿದ್ದ ವರುಣದೇವ ಮತ್ತೆ ಆರ್ಭಟಿಸಲು ಮುಂದಾಗಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆಯಾಗಲಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಉತ್ತರ ಕರ್ನಾಟಕ ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೆಯೇ ಸೆಪ್ಟೆಂಬರ್​ 27ರವರೆಗೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಮತ್ತೆ ಬಂತು ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ.. ಮಹಿಳಾ‌ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಸಾಥ್​!

Btv Kannada
Author: Btv Kannada

Read More