ಬೆಂಗಳೂರು : ದೊರೆಸ್ವಾಮಿ ನಾಯ್ಡು ಮಾಲೀಕತ್ವದ ಪಿಇಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ದಾಳಿ ಮಾಡಿರೋ ಐಟಿ ಅಧಿಕಾರಿಗಳು, ಸದ್ಯ ದಾಖಲೆಗಳ ಪರಿಶೀಲನೆ ನಡೆಸ್ತಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜ್, ಹನುಮಂತನಗರ ಕಾಲೇಜ್, ಆಂಧ್ರದ ಕುಪ್ಪಂ ಕಾಲೇಜ್ ಸೇರಿದಂತೆ ಹಲವೆಡೆ ದಾಳಿ ಮಾಡಲಾಗಿದೆ.
100ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ಕರ್ನಾಟಕ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ರೇಡ್ ಮಾಡಿದ್ದು, ಬನಶಂಕರಿ ಬಿಡಿಎ ಕಾಂಪ್ಲೇಕ್ಸ್ ಬಳಿಯ ದೊರೆಸ್ವಾಮಿ ನಾಯ್ಡು ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ ಮಾಡಿರೋ ಆರೋಪ ಹಿನ್ನೆಲೆ ಐಟಿ ಅಧಿಕಾರಿಗಳು ಸದ್ಯ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಪಿಇಎಸ್ ಶಿಕ್ಷಣ ಸಂಸ್ಥೆಯನ್ನು ದೊರೆಸ್ವಾಮಿ ಪುತ್ರ ಜವಹರ್ ದೊರೆಸ್ವಾಮಿ ನೋಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ.. ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ!







