ಮಂಗಳೂರು : ‘ಕೆಪಿಎಸ್‌ಸಿ ಇರುವವರೆಗೆ ರಾಜ್ಯದ ಜನರಿಗೆ ಉದ್ಯೋಗ ಸಿಗುವುದಿಲ್ಲ. ನನಗೆ ಅವಕಾಶ ಕೊಟ್ಟರೆ ಕೆಪಿಎಸ್‌ಸಿ ವಿಸರ್ಜಿಸಲೂ ಸಿದ್ಧ’ ಎಂದು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ನೇಮಕಾತಿ ಹೊಣೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹಂಚಿಕೆ ಮಾಡಿದ್ದೆವು. ಪ್ರಕ್ರಿಯೆಯನ್ನು ಕೆಇಎ ಪೂರ್ಣಗೊಳಿಸಿದೆ. ಕೆಪಿಎಸ್‌ಸಿ ಇನ್ನೂ ಪೂರ್ಣಗೊಳಿಸಿಲ್ಲ. ಸಾಂವಿಧಾನಿಕ ಸಂಸ್ಥೆ ಎಂಬ ಕಾರಣಕ್ಕೆ ಅದರ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡುವುದಕ್ಕೂ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಟೆಕ್ ಪಾರ್ಕ್‌ಗೆ ಅನುಮೋದನೆ : ಮಂಗಳೂರಿನಲ್ಲಿ ಅತಿ ದೊಡ್ಡ ಟೆಕ್ನಾಲಜಿ ಪಾರ್ಕ್ ಸ್ಥಾಪಿಸುವ ಪ್ರಸ್ತಾವವಿದ್ದು, ಇದಕ್ಕೆ ಸಚಿವ ಸಂಪುಟವು ಶೀಘ್ರವೇ ಅನುಮೋದನೆ ನೀಡಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ : ಇಂದಿನಿಂದ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಉತ್ಸವ!







