ಬೆಂಗಳೂರು : ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ರೌಡಿಶೀಟರ್ ಬಿಕ್ಲು ಶಿವನ ಬರ್ಬರ ಹತ್ಯೆ ಕೇಸ್ ಆರೋಪಿಗಳಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. 82ನೇ ವಿಶೇಷ ನ್ಯಾಯಾಲಯ ಆರೋಪಿಗಳ ಜಾಮೀನು ರದ್ದು ಮಾಡಿ ಆದೇಶ ಹೊರಡಿಸಿದೆ.
ಆರೋಪಿಗಳಾದ ದಿನೇಶ್, ಮಧನ್, ಪ್ರದೀಪ್, ಶಿವ @ ಆಟೋ ಶಿವ, ಮನೋಜ್, ಅರುಣಕುಮಾರ್ನಿಂದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಆರೋಪಿಗಳ ವಿರುದ್ದ ಕೋಕಾ ಕಾಯ್ದೆ ಹಾಕಿದ್ದ ಹಿನ್ನಲೆ ಕೋರ್ಟ್ ಜಾಮೀನು ರದ್ದು ಮಾಡಿದೆ.
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ ಆರೋಪಿಗಳು ಕೋರಿದ್ದ ಬೇಲ್ ಅರ್ಜಿಯನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಬೆಳಿಗ್ಗೆ ಅರ್ಚಕ, ರಾತ್ರಿ ಕಳ್ಳ – ದೇವಾಲಯದಲ್ಲಿ ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಖತರ್ನಾಕ್ ಖದೀಮರ ಬಂಧನ!
Author: Btv Kannada
Post Views: 334







