‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡಿರುವ ಪ್ಯಾನ್ ಇಂಡಿಯಾ ಸಿನಿಮಾ “ಕಾಂತಾರ ಅಧ್ಯಾಯ 1” ಅಕ್ಟೋಬರ್ 2ರಂದು ಬಿಡುಗಡೆ ಆಗಲಿದೆ. ಭಾರಿ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ “ಕಾಂತಾರ ಅಧ್ಯಾಯ 1” ಚಿತ್ರದ ಟಿಕೆಟ್ ಬುಕ್ಕಿಂಗ್ ನಾಳೆಯಿಂದಲೇ ಆರಂಭವಾಗಲಿದೆ.

ವಿಶ್ವವೇ ಎದುರು ನೋಡುತ್ತಿರುವ “ಕಾಂತಾರ ಅಧ್ಯಾಯ 1” ಚಿತ್ರದ ಟಿಕೆಟ್ ಬುಕ್ಕಿಂಗ್ ನಾಳೆ ಮಧ್ಯಾಹ್ನ 12.29ಕ್ಕೆ ಕರ್ನಾಟಕದಾದ್ಯಂತ ಆರಂಭವಾಗಲಿದೆ ಎಂದು ಹೊಂಬಾಳೆ ಫಿಲಂಸ್ ಸಂಸ್ಥೆ ಮಾಹಿತಿ ನೀಡಿದೆ. ಸೆಟ್ಟೇರಿದ ದಿನದಿಂದಲೂ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ವಿಜಯ್ ಕಿರಗಂದೂರು ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಿಷಬ್ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ಈಗಾಗಲೇ ಟ್ರೇಲರ್ ಧೂಳೆಬ್ಬಿಸಿದೆ.

“ಕಾಂತಾರ ಆಧ್ಯಾಯ ೧” ಚಿತ್ರವು ಅಕ್ಟೋಬರ್ 2 ರಂದು ಭಾರತದಾದ್ಯಂತ 7000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಕನ್ನಡ ಸೇರಿದಂತೆ ಸಪ್ತ ಭಾಷೆಗಳಲ್ಲಿ ಭಾರತ ಹಾಗೂ ಭಾರತದಾಚೆಗೂ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಅಕ್ಟೋಬರ್ 1ರಂದು ಪ್ರೀಮಿಯರ್ ಶೋ ಇರಲಿದೆ. ಒಂದು ವಾರ ಮುಂಚೆಯೇ ಬುಕಿಂಗ್ ಓಪನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.
ಇದನ್ನೂ ಓದಿ : ಬಿಸಿಲು ಬೀಳ್ತಿಲ್ಲ, ವಾಕಿಂಗ್ ಹೋಗಲು ಜಾಗ ಇಲ್ಲ.. ಸ್ಕಿನ್ ಅಲರ್ಜಿ ಆಗಿದೆ – ಜಡ್ಜ್ ಮುಂದೆ ನಟ ದರ್ಶನ್ ಅಳಲು!







