ಬೆಂಗಳೂರು : ಫರ್ನಿಚರ್ ಶಾಪ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಲ್ಲೇಶ್ವರಂನ ಪೈಪ್ ಲೈನ್ ರೋಡ್ನಲ್ಲಿ ನಡೆದಿದೆ.
ರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ ಬೆಂಕಿ ಅಕ್ಕಪಕ್ಕದ ಅಪಾರ್ಟ್ಮೆಂಟ್ನ 3 ಮನೆಗಳಿಗೂ ಆವರಿಸಿದೆ. 13 ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಅಗ್ನಿ ಅವಘಡದ ವೇಳೆ ಅಂಗಡಿ ಒಳಗಡೆ ಸುಮಾರು 10 ಜನ ಕೆಲಸಗಾರರು ಮಲಗಿದ್ದರು. ಅಕ್ಕಪಕ್ಕದ ನಿವಾಸಿಗಳು ಅವರನ್ನು ಎಚ್ಚರಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಜಯರಾಮ್ ದೇವಸಮುದ್ರ ನಿರ್ಮಾಣದ ಹೊಸ ಚಿತ್ರಕ್ಕೆ ಶ್ರೀಮುರಳಿ ನಾಯಕ – ನವೆಂಬರ್ನಿಂದ ಶೂಟಿಂಗ್ ಶುರು!
Author: Btv Kannada
Post Views: 236







