ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ಕಾರಿ ಮಹಿಳಾ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯಲ್ ಎನ್ಫೀಲ್ಡ್ ಬೈಕ್ ಸ್ಕೈವಾಕ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

20 ವರ್ಷದ ಉದಯಗಿರಿಯ ಡ್ಯಾನಿಲ್, ಯತ್ತಗದಹಳ್ಳಿಯ 20 ವರ್ಷದ ಜೋಶ್ ಆ್ಯಲ್ಡ್ಸ್ ಮೃತ ಯುವಕರು. ಡಿಕ್ಕಿಯ ರಭಸಕ್ಕೆ ಇವರ ದೇಹಗಳು ಛಿದ್ರ ಛಿದ್ರವಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೃತ ದೇಹಗಳನ್ನು ಮಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದ್ದು, ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : “ಫ್ರಾಡ್ ಋಷಿ” ಚಿತ್ರದ ಎರಡನೇ ಹಾಡು ಬಿಡುಗಡೆ – ನಿರ್ಮಾಪಕ ಕೆ.ಮಂಜು ಸಾಥ್!
Author: Btv Kannada
Post Views: 392







