ಕರುನಾಡನ್ನು ಬಿಂಬಿಸುವ ಬಿಗ್​ಬಾಸ್ ಅರಮನೆ – ʻಅಸಲಿ ಹಬ್ಬ ಇವಾಗ ಶುರುʼ ದೊಡ್ಡ ಸಿಗ್ನಲ್‌ ಕೊಟ್ಟ ಕಿಚ್ಚ ಸುದೀಪ್‌!

‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆಯಿಂದ ಕಲರ್ಸ್ ಕನ್ನಡ ಚಾನಲ್​ನಲ್ಲಿ ಬಿಗ್ ಬಾಸ್ ಶೋ ಆರಂಭವಾಗಲಿದೆ. ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ ಕರ್ನಾಟಕದಲ್ಲಿ ಮನೆ ಮಾತಾಗಿದೆ. ಇದೀಗ ಈ ಬಾರಿಯ ಬಿಗ್ ಬಾಸ್ ಶೋ ಸೆಟ್ ಹೇಗಿರಲಿದೆ ಅನ್ನೋದನ್ನು ಕಲರ್ಸ್ ಕನ್ನಡ ರಿವೀಲ್ ಮಾಡಿದೆ.

ಕಲರ್ಸ್ ಕನ್ನಡ ಚಾನಲ್ ಬಿಗ್ ಬಾಸ್‌ ಸೆಟ್​ನ ವಿಡಿಯೋ ರಿಲೀಸ್ ಮಾಡಿದ್ದು, ಈ ಬಾರಿಯ ಬಿಗ್ ಬಾಸ್ ಸೆಟ್ ಅನ್ನು ಮೈಸೂರು ಅರಮನೆಯ ಥೀಮ್​ನಲ್ಲಿ ನಿರ್ಮಾಣ ಮಾಡಿರುವುದು ವಿಶೇಷ. ಮೈಸೂರು ದಸರಾ ನಡೆಯುವಾಗ ಬಿಗ್ ಬಾಸ್ ಶೋ ಆರಂಭವಾಗುತ್ತಿರುವುದಕ್ಕೋ ಏನೋ ಮೈಸೂರು ಅರಮನೆಯ ಥೀಮ್​ನಲ್ಲೇ ಸೆಟ್ ನಿರ್ಮಾಣ ಮಾಡಲಾಗಿದೆ.

ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ನಮ್ಮ ಶ್ರೀಮಂತವಾಗಿರುವ ಕರ್ನಾಟಕವನ್ನು ಒಂದೇ ಜಾಗದಲ್ಲಿ ಸ್ಕೆಚ್ ಮಾಡಿದ್ರೇ, ನೋಡೋಕೆ ಹೇಗಿರುತ್ತೆ, ಅಂತ ನೋಡಬೇಕು ಅಂದ್ರೆ, ಹೀಗಿರುತ್ತೆ. ಹೀಗೆ ಅರಮನೆಯನ್ನು ಉಳಿಸಿಕೊಳ್ಳಲಿಕ್ಕೆ ಎಷ್ಟೋ ಯುದ್ದಗಳು ನಡೆದು ಹೋಗಿವೆ. ಈ ಅರಮನೆಯಲ್ಲಿ ತಮ್ಮನ್ನು ತಾವು ಉಳಿಸಿಕೊಳ್ಳಲಿಕ್ಕೆ ಬಹಳ ಯುದ್ಧಗಳು ನಡೆಯಲಿವೆ. ನಮ್ಮ ನಾಡಿಗೆ ದಸರಾ ಹಬ್ಬ ಶುರುವಾಗಿ ಒಂದು ವಾರ ಆಯ್ತು. ನಮ್ಮ ಬಿಗ್ ಬಾಯ್ ಮನೆಯಲ್ಲಿ ಮಸ್ತಿ ಹಬ್ಬ ಈಗ ಶುರು ಎಂದು ನಿರೂಪಕ ಕಿಚ್ಚ ಸುದೀಪ್ ಹೇಳಿದ್ದಾರೆ.

ನಾಳೆ (ಸೆಪ್ಟೆಂಬರ್ 28) ಸಂಜೆ 6 ಗಂಟೆಯಿಂದ ಬಿಗ್ ಬಾಸ್ ಶೋ ಆರಂಭವಾಗಲಿದ್ದು, ಪ್ರೇಕ್ಷಕರು ಈ ಬಾರಿಯ ಬಿಗ್ ಬಾಸ್​ನ ಸ್ಫರ್ಧಿಗಳು ಯಾರೆಲ್ಲಾ ಅನ್ನೋದನ್ನು ತಿಳಿದುಕೊಳ್ಳೋ ಕುತೂಹಲದಲ್ಲಿದ್ದಾರೆ.

ಇದನ್ನೂ ಓದಿ : ಧರ್ಮ ರಕ್ಷಣೆಯ ಹೊಣೆ ಹೊತ್ತ ಪರಶುರಾಮನ ಅಧ್ಯಾಯ ಶುರು – ಕನ್ನಡ ಕಿರುತೆರೆಯಲ್ಲಿ ಇದೇ ಮೊದಲು!

Btv Kannada
Author: Btv Kannada

Read More