ಬೆಂಗಳೂರು : ಶಾಸಕರಾದ ಎ.ಎಸ್ ಪೊನ್ನಣ್ಣ, ಮಂತರ್ ಗೌಡ ಹಾಗೂ ತೆನ್ನೀರ ಮಹಿನಾ ಸೇರಿ ಪೊಲೀಸರು ಕಿರುಕುಳ ಕೊಡ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ವಿನಯ್ ಸೋಮಯ್ಯ ಮೃತದೇಹ ರವಾನಿಸಿದ್ದಾರೆ.
ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿ ಮೃತ ವಿನಯ್ ಸೋಮಯ್ಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಆರ್ ಅಶೋಕ್, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ : ಡಾ.ರಾಜ್ ಕುಟುಂಬದ ಮತ್ತೋರ್ವ ಸೊಸೆ ರಾಜಕೀಯಕ್ಕೆ ಎಂಟ್ರಿನಾ – ಅಶ್ವಿನಿ ಪುನೀತ್ ರಾಜ್ ಕುಮಾರ್ಗೆ MLC ಟಿಕೆಟ್ ಆಫರ್ ಕೊಟ್ಟ ಡಿಕೆಶಿ!
