ಜಾತಿ ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಿ, ವೈಯಕ್ತಿಕ ಮಾಹಿತಿ ನೀಡ್ಬೇಡಿ – ಆ‌ರ್. ಅಶೋಕ್ ಮನವಿ!

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ವಿಪಕ್ಷ ನಾಯಕ ಆ‌ರ್. ಅಶೋಕ್ ಹೇಳಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಆ‌ರ್. ಅಶೋಕ್ ಮಾತನಾಡಿ, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೋ ಅಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು.

ಮುಂದಿನ ಬಜೆಟ್ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ ಸಮೀಕ್ಷೆ. ಜನರಿಗೆ ಪಂಗನಾಮ ಹಾಕುವ ಸಮೀಕ್ಷೆ. ಯಾರೂ ವೈಯಕ್ತಿಕ ದಾಖಲೆಗಳನ್ನು ನೀಡಬಾರದು. ಯಾವ್ಯಾವ ಪ್ರಶ್ನೆಗೆ ಉತ್ತರ ಕೊಡಬಹುದೋ ಅಷ್ಟನ್ನು ಮಾತ್ರ ನೀಡಿದರೆ ಸಾಕು. ಹೈಕೋರ್ಟ್ ಕೂಡ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕಿಲ್ಲ ಎಂದಿದೆ. ಬೆಳಗಾವಿ, ರಾಯಚೂರು, ವಿಜಯಪುರ ಮೊದಲಾದ ಭಾಗಗಳಲ್ಲಿ ಪ್ರವಾಸ ಮಾಡಿ ಮಳೆ ಹಾನಿ ಪರಿಶೀಲನೆ ಮಾಡುತ್ತೇನೆ. ಹಿಂದೆ ಬಿಜೆಪಿ ಇದ್ದಾಗ ಜನರಿಗೆ ಉತ್ತಮ ಪರಿಹಾರ ನೀಡಲಾಗಿತ್ತು. ಈಗ ಕಾಂಗ್ರೆಸ್ ಏನೂ ನೀಡುತ್ತಿಲ್ಲ. ರೈತರಿಗೆ ಬೆಳೆ ಪರಿಹಾರ ನೀಡಿಲ್ಲ ಎಂದು ವಿಪಕ್ಷ ನಾಯಕ ಆ‌ರ್. ಅಶೋಕ್ ತಿಳಿಸಿದರು.

ಇದನ್ನೂ ಓದಿ : ಬೆಂಗಳೂರಲ್ಲಿ CCB ಪೊಲೀಸರ ಭರ್ಜರಿ ಕಾರ್ಯಾಚರಣೆ – ಬರೋಬ್ಬರಿ 7.80 ಕೋಟಿ ಮೌಲ್ಯದ ಡ್ರಗ್ಸ್ ಸೀಜ್.. ಆರೋಪಿಗಳು ಅರೆಸ್ಟ್!

Btv Kannada
Author: Btv Kannada

Read More