ಮಹೇಶ್​ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ – ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್​!

ಮಂಗಳೂರು : ಸಾಮಾಜಿಕ ಕಾರ್ಯಕರ್ತ ಮಹೇಶ್​ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದರು. ಈ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರಿಗೆ ಮಧ್ಯಂತರ​ ತಡೆ ನೀಡಿದೆ.

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್​ ಸಿಕ್ಕಿದ್ದು, ಅಕ್ಟೋಬರ್ 8 ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಹೈಕೋರ್ಟ್​ನ ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದಾರೆ.

ಮಹೇಶ್ ತಿಮರೋಡಿ ಗಡಿಪಾರಿಗೆ ತಡೆ ನೀಡಿದ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್​ ಜಾರಿ ಮಾಡಲಾಗಿದೆ. ನೋಟಿಸ್​ ಜಾರಿ ಮಾಡಿ ಅಕ್ಟೋಬರ್ 8ಕ್ಕೆ ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ : ಕುತೂಹಲ ಹೆಚ್ಚಿಸಿದ ಕೋಣ ಚಿತ್ರದ ಟ್ರೇಲರ್ – ಹೊಸ ಅವತಾರದಲ್ಲಿ ಸೆನ್ಸೇಷನಲ್ ಸ್ಟಾರ್ ಕೋಮಲ್‌!

Btv Kannada
Author: Btv Kannada

Read More