ಬೆಂಗಳೂರು : ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್‌ಗಳು ಮತ್ತು ಚಿತ್ರಮಂದಿರಗಳಲ್ಲಿ 200 ರೂಪಾಯಿ ಏಕರೂಪದ ಸಿನಿಮಾ ಟಿಕೆಟ್ ದರ ವಿಚಾರಕ್ಕೆ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಮುಂದಿನ ಆದೇಶದವರೆಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಸಂಗ್ರಹಿಸುವ ಹಣ, ಆನ್ಲೈನ್ ಪೇಮೆಂಟ್ ಸೇರಿ ಎಲ್ಲಾ ಲೆಕ್ಕ ನಿರ್ವಹಿಸಬೇಕು ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ಗೆ ಹೈಕೋರ್ಟ್ ಸೂಚನೆ ನೀಡಿದೆ.
ಒಂದೊಮ್ಮೆ ಪೀಠ ನಿಯಮ ಎತ್ತಿ ಹಿಡಿದರೆ ಆ ಹಣ ಟಿಕೆಟ್ ಖರೀದಿ ಮಾಡಿದವರಿಗೆ ವಾಪಸ್ ಕೊಡಬೇಕು, ನಗದು ಹಣ ನಿರ್ದಿಷ್ಟ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆ ಮಾಡಬಹುದು. ಇದನ್ನ ಸರ್ಕಾರ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು, ಮಲ್ಟಿಪ್ಲೆಕ್ಸ್ ಸಿನಿಮಾ ಆರಂಭಕ್ಕೂ ಮುನ್ನ ಜನರಿಗೆ ತಿಳಿಸಬೇಕು. ನಿಯಮಿತವಾಗಿ ಟಿಕೆಟ್ ಮಾರಾಟ ಮಾಡಿ ಹಣದ ನಿರ್ವಹಣೆ ಲೆಕ್ಕ ಇಡಲು ಹೈಕೋರ್ಟ್ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ಗೆ ಆದೇಶ ನೀಡಿ ಹೈಕೋರ್ಟ್ ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ : ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ – ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್!







