ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಂ.ಎಸ್​ ಆತ್ಮಾನಂದ ನೇಮಕ!

ಬೆಂಗಳೂರು : ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆ‌ರ್.ಲತಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಆತ್ಮಾನಂದ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಮಲ್ಟಿಪ್ಲೆಕ್ಸ್​ನಲ್ಲಿ ಸಂಗ್ರಹಿಸುವ ಹಣದ ಲೆಕ್ಕ ನಿರ್ವಹಿಸಬೇಕು – ಅಸೋಸಿಯೇಷನ್​ಗೆ ಹೈಕೋರ್ಟ್ ನೋಟಿಸ್!

Btv Kannada
Author: Btv Kannada

Read More