ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿವೆ.

ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಬೇಸ್ಮೆಂಟ್‌ನಲ್ಲಿದ್ದ ಇವಿ ಬೈಕ್ ಚಾರ್ಜಿಂಗ್ ಪಾಯಿಂಟ್ ಓವರ್ ಹೀಟ್ ಆದ ಪರಿಣಾಮ ಅಲ್ಲಿದ್ದ ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಜೊತೆಗೆ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಆರು ಸಿಲಿಂಡರ್‌ಗಳ ಗ್ಯಾಸ್ ಸೋರಿಕೆಯಾಗಿದ್ದು, ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ.

ಸದ್ಯ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜೊತೆಗೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಅರಮನೆ ನಗರಿಯಲ್ಲಿ ದಸರಾ ಸಂಭ್ರಮ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಶುರು!
Author: Btv Kannada
Post Views: 392







