ಕಲಬುರಗಿ : ಪೆಟ್ರೋಲ್ ಹಾಕುವ ವಿಚಾರಕ್ಕೆ ಜಗಳ ತೆಗೆದ ಪುಂಡರು ಬಂಕ್ನಲ್ಲಿ ಕೆಲಸ ಮಾಡೋ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಕಲಬುರಗಿಯ ವಿಶ್ವಾರಾಧ್ಯ ದೇವಸ್ಥಾನ ಬಳಿ ನಡೆದಿದೆ.

6 ಜನ ಪುಂಡರು ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುವ ಯುವಕನಿಗೆ ಮನ ಬಂದಂತೆ ಹಲ್ಲೆ ಮಾಡಿದ್ದಾರೆ. ಈ ಘಟನೆ ಕಲಬುರಗಿಯ ಸಬ್ ಅರ್ಬನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾರಕಾಸ್ರ್ತಗಳಿಂದ ಹಲ್ಲೆ ಮಾಡಿದ ಪುಂಡರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬಂಕ್ನಲ್ಲಿ ಯುವಕನ ಮೇಲೆ ಹಲ್ಲೆ ಮಾಡೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ : ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿ.ಜಿ ದ್ವಾರಕನಾಥ್ ನಿಧನ!
Author: Btv Kannada
Post Views: 365







