ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಆರಂಭದಲ್ಲೇ ಸರಿಯಾದ ರೀತಿಯಲ್ಲಿ ತಾಜ್ಯ ವಿಲೇವಾರಿ ಮಾಡದ ಕಾರಣದಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಾಲಿವುಡ್ ಸ್ಟುಡಿಯೋಗೆ ನೋಟಿಸ್ ಜಾರಿ ಮಾಡಲಾಗಿದೆ.
ಜಾಲಿವುಡ್ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ ಎಂಬ ಆರೋಪ ಎದುರಾಗಿದೆ. ಅಲ್ಲದೇ, ಜಾಲಿವುಡ್ ಸ್ಡುಡಿಯೋ ನಡೆಸಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆದಿಲ್ಲ ಎನ್ನಲಾಗಿದೆ. ಈ ಕಾರಣದಿಂದ ಶೋ ಆಯೋಜಕರಿಗೆ ನೋಟಿಸ್ ನೀಡಲಾಗಿದ್ದು, ಬಂದ್ ಮಾಡುವಂತೆ ಸೂಚಿಸಲಾಗಿದೆ.

ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಒಂದು ಅಮ್ಯೂಸ್ಮೆಂಟ್ ಪಾರ್ಕ್. ಅದರಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ. ಅದನ್ನು ಸರಿಯಾಗಿ ಸಂಸ್ಕರಿಸದೇ ಹೊರಗೆ ಬಿಡಲಾಗುತ್ತಿದೆ. ಅದರಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯ ಮುಂತಾದ್ದನ್ನು ಕೂಡ ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂಬ ಆರೋಪ ಇದೆ.
ಈ ಎಲ್ಲ ಕಾರಣಗಳಿಂದಾಗಿ ಜಾಲಿವುಡ್ ಸ್ಟುಡಿಯೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಇದರಿಂದಾಗಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ವಿಘ್ನ ಎದುರಾದಂತೆ ಆಗಿದೆ.
ಇದನ್ನೂ ಓದಿ : 4 ಸಿಟಿ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ದಿಢೀರ್ ಬ್ರೇಕ್ – ಸಿಎಂ, ಡಿಸಿಎಂ, ಗೃಹ ಸಚಿವರ ಅಧೀನದಲ್ಲೇ ಟ್ರಾನ್ಸ್ಫರ್ಗೆ ‘ಹೈ’ ಸಂದೇಶ!







