ಇಂದಿನಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭ – ಮಧ್ಯಾಹ್ನ 12 ಗಂಟೆಗೆ ದೇವಿಯ ಗರ್ಭಗುಡಿ ಬಾಗಿಲು ಓಪನ್!

ಹಾಸನ : ಹಾಸನಾಂಬೆಯ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದಿನಿಂದ ಅಕ್ಟೋಬರ್ 23 ರವರೆಗೂ ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ನಡೆಯಲಿದೆ.

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಈ ದೇಗುಲದ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಓಪನ್ ಆಗಲಿದೆ. ಹಾಸನಾಂಬೆ ದೇವಿ ದರ್ಶನಕ್ಕೆ ಬರುವ ಭಕ್ತರಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಇಂದು ಹಾಗೂ ಕೊನೇ ದಿನ ಹೊರತುಪಡಿಸಿ 13 ದಿನ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕಳೆದ ವರ್ಷ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಈ ಬಾರಿ 25 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನಕ್ಕೆ ಬರುವ ನಿರೀಕ್ಷೆಯಿದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳು, ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ, ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಹಾಸನ ಡಿಸಿ, ಎಸ್​ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಗುತ್ತದೆ. ಇನ್ನು ಈ ವೇಳೆ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಭಾಗಿಯಾಗಲಿದ್ದಾರೆ.

ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗಾಗಿ ಹಲವು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಜಾತ್ರೋತ್ಸವದಲ್ಲಿ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಜಾನಪದ ಉತ್ಸವ ಸೇರಿದಂತೆ ಹಲವು ಪ್ರದರ್ಶನಗಳ ವ್ಯವಸ್ಥೆ ಕೂಡ ಇದೆ.

ಇದನ್ನೂ ಓದಿ : ಮಿಡ್​ನೈಟ್ ಮಹಮ್ಮದ್ ನಲಪಾಡ್ ರಂಗ ಪ್ರವೇಶ.. ಕಿಚ್ಚ ಸುದೀಪ್- ಡಿಕೆಶಿ ಜೊತೆ ಸಂಧಾನ ಸಕ್ಸಸ್.. ಬಿಗ್​ಬಾಸ್ ಓಪನ್!

Btv Kannada
Author: Btv Kannada

Read More